Publish Date: Tue, 07 Jul 2020 (09:07 IST)
Updated Date: Tue, 07 Jul 2020 (09:08 IST)
ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿರುವ ಸುಮಲತಾ ಅವರು, ನಾನು ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದೆ. ಹಾಗೇ ನನಗೆ ಸ್ವಲ್ಪತಲೆನೋವು, ಗಂಟಲು ನೋವು ಕಾಣಿಸಿಕೊಂಡಿತ್ತು. ಆದರೆ ಕೊರೊನಾ ಟೆಸ್ಟ್ ವರದಿ ಬಂದಿದ್ದು ಅದರಲ್ಲಿ ಪಾಸಿಟಿವ್ ಇದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಅಲ್ಲದೇ ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿಕೊಂಡಿದ್ದಾರೆ.