Select Your Language

Notifications

webdunia
webdunia
webdunia
webdunia

ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಸುಮಲತಾ ಅಂಬರೀಶ್

ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಸುಮಲತಾ ಅಂಬರೀಶ್
ಮಂಡ್ಯ , ಮಂಗಳವಾರ, 19 ಮಾರ್ಚ್ 2019 (06:23 IST)
ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆಗೆ ಸುಮಲತಾ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.


ಮಂಡ್ಯ ಜನರ ಏಳಿಗೆಗಾಗಿ ಶ್ರಮಿಸಲು ಆ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದುಕೊಂಡ ಸುಮಲತಾ ಅವರು ಕಾಂಗ್ರೆಸ್ ನಾಯಕರ ಬಳಿ ಟಿಕೆಟ್ ಕೇಳಿದ್ದಾರೆ. ಆದರೆ ದೋಸ್ತಿ ಸರ್ಕಾರದ ಸೀಟು ಹಂಚಿಕೆಯಲ್ಲಿ ಕಾಂಗ್ರೆಸ್,  ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಹಿನ್ನಲೆಯಲ್ಲಿ ಇದೀಗ ಸುಮಲತಾ ಅವರು  ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದ್ದಾರೆ.


ಮಂಡ್ಯ ಜನರಿಗಾಗಿ, ಮಂಡ್ಯ ಜನತೆಯ ಪ್ರೋತ್ಸಾಹದಿಂದ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಇದಕ್ಕಾಗಿ ನನ್ನ ಬೆನ್ನೆಲುಬಾಗಿ ನಿಂತ ಎಲ್ಲರಿಗೂ ಕೃತಜ್ಞತೆ ತಿಳಿಸುವುದಾಗಿ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ನಾಯಿಮರಿಯ ಮೇಲೆ ರೇಪ್ ಎಸಗಿದ ಕಾಮುಕ: ಸಿಸಿಟಿವಿಯಲ್ಲಿ ಲೈವ್ ಸೆರೆ