Select Your Language

Notifications

webdunia
webdunia
webdunia
webdunia

ಪ್ರವಾಹದ ವೇಳೆ ಚಿರಂಜೀವಿ ಜೊತೆ ಡ್ಯಾನ್ಸ್ ಮಾಡಿದ್ರಾ ಸುಮಲತಾ. ಈ ಬಗ್ಗೆ ಸುಮಲತಾ ಹೇಳಿದ್ದೇನು?

ಪ್ರವಾಹದ ವೇಳೆ ಚಿರಂಜೀವಿ ಜೊತೆ ಡ್ಯಾನ್ಸ್ ಮಾಡಿದ್ರಾ ಸುಮಲತಾ. ಈ ಬಗ್ಗೆ ಸುಮಲತಾ ಹೇಳಿದ್ದೇನು?
ಬೆಂಗಳೂರು , ಶುಕ್ರವಾರ, 23 ಆಗಸ್ಟ್ 2019 (10:59 IST)
ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಅವರು ಮೆಗಾಸ್ಟಾರ್ ಚಿರಂಜೀವಿ ಜೊತೆ ಡ್ಯಾನ್ಸ್ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.




ಚಿರಂಜೀವಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ ಸುಮಲತಾ ಅವರು ಈ ರೀತಿಯಾಗಿ ಕುಣಿದಿದ್ದು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇರಬೇಕಾದರೆ ಸುಮಲತಾ ಡ್ಯಾನ್ಸ್ ಮಾಡಿರುವುದು ಸರಿನಾ ಎಂದು ಹಲವರು ಕಿಡಿಕಾರಿದ್ದಾರೆ.


ಇದಕ್ಕೆ ಸ್ಪಷ್ಟನೆ ನೀಡಿದ ಸುಮಲತಾ ಅವರು, ಇದು 4 ವರ್ಷಗಳ ಹಿಂದಿನ ಹಳೆಯ ವಿಡಿಯೋ ಆಗಿದೆ. ನನ್ನ ಹೆಸರಿನ ನಕಲಿ ಅಕೌಂಟ್‍ ನಲ್ಲಿ ಕಿಡಿಗೇಡಿಗಳು ವಿಡಿಯೋ ಹಾಕಿದ್ದು, ಇದರಿಂದ ನನ್ನ ತೇಜೋವಧೆಗೆ ಯತ್ನಿಸಲಾಗಿದೆ ಎಂದಿದ್ದಾರೆ. ಅಲ್ಲದೆ ಫೇಸ್‍ಬುಕ್‍ನಲ್ಲಿ ನಕಲಿ ಅಕೌಂಟ್ ತೆಗೆದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು  ಸೈಬರ್ ಕ್ರೈಂಗೆ ದೂರು ರುವುದಾಗಿ ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ರಾಮದಾಸ್ ಕಾರು ಅಪಘಾತ; ಪ್ರಾಣಾಪಾಯದಿಂದ ಪಾರಾದ ಶಾಸಕ