Publish Date: Wed, 03 Apr 2024 (11:41 IST)
Updated Date: Wed, 03 Apr 2024 (11:43 IST)
ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಸುಮಲತಾ ಅಂಬರೀಶ್ ಇಂದು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಇದೇ ಹಿನ್ನಲೆಯಲ್ಲಿ ಇದೀಗ ಕಾಳಿಕಾಂಬ ದೇವಸ್ಥಾನಕ್ಕೆ ಬಂದಿದ್ದಾರೆ.
ಕಾಳಿಕಾಂಬ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ ಬಳಿಕ ಜನರ ಮುಂದೆಯೇ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತೀರ್ಮಾನ ಮಾಡುವುದಾಗಿ ಸುಮಲತಾ ಹೇಳಿದ್ದಾರೆ. ಅದರಂತೆ ದೇವಾಲಯಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೀಗ ಕೆಲವೇ ಕ್ಷಣದಲ್ಲಿ ಘೋಷಣೆ ಮಾಡಲಿದ್ದಾರೆ.
ಸುಮಲತಾಗೆ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಪುತ್ರ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ. ಜೊತೆಗೆ ಸುಮಲತಾ ಬೆಂಬಲಿಗರೂ ಅಪಾರ ಸಂಖ್ಯೆಯಲ್ಲಿ ದೇವಾಲಯದಲ್ಲಿ ಸೇರಿದ್ದಾರೆ. ದರ್ಶನ್ ಕೂಡಾ ನನ್ನ ಜೊತೆಗಿರಲಿದ್ದಾರೆ ಎಂದು ಸುಮಲತಾ ಮೊನ್ನೆಯೇ ಹೇಳಿದ್ದರು.
ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆಯ ದಿನವಾಗಿದೆ. ಹೀಗಾಗಿ ಅವರು ಇಂದು ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ. ಅವರ ನಿರ್ಧಾರಕ್ಕಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ.