Publish Date: Tue, 16 Apr 2019 (10:02 IST)
Updated Date: Tue, 16 Apr 2019 (10:15 IST)
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳುವುದರ ಮೂಲಕ ಸಚಿವ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಬಿಜೆಪಿ ಜೊತೆ ಸೇರಲು ಸಿದ್ದತೆ ನಡೆಸಿದ್ದಾರೆ, ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಜೊತೆ ಸುಮಲತಾ ಚರ್ಚೆ ನಡೆಸಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋ ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಆದರೆ ಸುಮಲತಾ ಅವರು ಪ್ರಚಾರದ ಸಮಯದಲ್ಲಿ ತಾವು ಬಿಜೆಪಿ ಸೇರುವುದಿಲ್ಲ ಎಂದು ಮತದಾರರಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಈ ನಡುವೆ ಇದೀಗ ಸಚಿವ ಪುಟ್ಟರಾಜು ಈ ರೀತಿ ಹೇಳಿಕೆ ನೀಡುವುದರ ಮೂಲಕ ಮತದಾರರಲ್ಲಿ ಗೊಂದಲವನ್ನುಂಟುಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.