Select Your Language

Notifications

webdunia
webdunia
webdunia
webdunia

ಮಾಧ್ಯಮ ವರದಿಗಳಿಗೆ ಸುಮಲತಾ ತಿರುಗೇಟು

Sumalta's response to media reports
bangalore , ಬುಧವಾರ, 24 ಮೇ 2023 (13:33 IST)
ಕಳೆದ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳು ಮತ್ತು ಪ್ರಮುಖ ಸ್ಥಳೀಯ ಸಂಸ್ಥೆಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದ್ದ ಪ್ರಬಲ ಜೆಡಿಎಸ್ ಸೋಲಿಸಿ ಸುಮಲತಾ ಅಂಬರೀಶ್ ಏಕಾಂಗಿಯಾಗಿ ಹೋರಾಡಿ ಮಂಡ್ಯ ಸಂಸದರಾಗಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು, ಆದರೆ ಅವರ ತಂತ್ರಗಾರಿಕೆ ವಿಧಾನಸಭೆ ಚುನಾವಣೆಯಲ್ಲಿ ನಡೆಯಲಿಲ್ಲ ಎಂದು ಅವರ ಬಗ್ಗೆ ಟೀಕೆಗಳು ಕೇಳಿ ಬಂದಿದ್ದವು. ಈ ಬಾರಿ ಮಂಡ್ಯದ ಸಂಸದೆ ಸುಮಲತಾ ಬಿಜೆಪಿ ಬೆಂಬಲಿಸಿದ್ದರು. ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದರು. ಆದರೆ ಪಕ್ಷ ಜಿಲ್ಲೆಯಲ್ಲಿ ಒಂದೂ ಸ್ಥಾನ ಗೆದ್ದಿಲ್ಲ. ಈ ಕುರಿತು ಕೆಲವು ವರದಿಗಳು ಬರುತ್ತಿವೆ. ಈ ಕುರಿತು ಸೋಮವಾರ ಅವರು ಸುದೀರ್ಘ ಪೋಸ್ಟ್‌ ಒಂದನ್ನು ಹಾಕಿದ್ದಾರೆ. 'ಕಪೋಲಕಲ್ಪಿತ ವರದಿ ಮಾಡುತ್ತಿರುವ ಕೆಲ ದೃಶ್ಯ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ವರದಿಗೆ ಇದು ನನ್ನ ಪ್ರತ್ಯುತ್ತರ' ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೈಕ್​ನಿಂದ ಪೆಟ್ರೋಲ್ ವಾಪಸ್ ತೆಗೆದ ಸಿಬ್ಬಂದಿ