Select Your Language

Notifications

webdunia
webdunia
webdunia
webdunia

ಖ್ಯಾತ ಕವಿ ಸುಮತೀಂದ್ರ ನಾಡಿಗ ಇನ್ನಿಲ್ಲ!

ಖ್ಯಾತ ಕವಿ ಸುಮತೀಂದ್ರ ನಾಡಿಗ ಇನ್ನಿಲ್ಲ!
ಬೆಂಗಳೂರು , ಮಂಗಳವಾರ, 7 ಆಗಸ್ಟ್ 2018 (10:28 IST)
ಬೆಂಗಳೂರು: ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಾಗಿ ಪ್ರಸಿದ್ಧರಾಗಿದ್ದ ಡಾ. ಸುಮತೀಂದ್ರ ನಾಡಿಗ (83) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾಡಿಗ ಅವರು ಪತ್ನಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.


ಮೃತರ ಪಾರ್ಥಿವ ಶರೀರವನ್ನು ಕುಟುಂಬಸ್ಥರು ನಗರದ ಸಾರಕ್ಕಿ ಸಿಗ್ನಲ್ ಬಳಿ ಇರುವ ಸುಮತೀಂದ್ರ ನಾಡಿಗ ಸಮುದಾಯ ಭವನದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಾಗಿ ಪ್ರಸಿದ್ಧರಾಗಿರುವ ಡಾ. ಸುಮತೀಂದ್ರ ನಾಡಿಗರು ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಮೇ 4, 1935ರಲ್ಲಿ ಜನಿಸಿದ್ದರು. ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಅಮೆರಿಕದ ಫಿಲೆಡೆಲ್ಫಿಯಾ ವಿಶ್ವವಿದ್ಯಾಲಯಗಳಿಂದ ಇಂಗ್ಲಿಷ್ ಎಂ.ಎ. ಪದವಿಯನ್ನು ಪಡೆದುಕೊಂಡಿದ್ದರು. ಅಧ್ಯಾಪನದ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಾ ಬಂದಿರುವ ಸುಮತೀಂದ್ರ ನಾಡಿಗರು ಕಾವ್ಯ, ಸಣ್ಣಕಥೆ, ವಿಮರ್ಶೆ, ಅನುವಾದ ಪ್ರಕಾರಗಳಲ್ಲಿ ತಮ್ಮ ಅಮೂಲ್ಯ ಕೊಡುಗೆಗಳನ್ನು ಸಲ್ಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪುರುಷರನ್ನು ದೋಚುತ್ತಿದ್ದ ಖತರ್ನಾಕ್ ಮಹಿಳೆಯರು!