Publish Date: Fri, 09 Feb 2024 (14:21 IST)
Updated Date: Fri, 09 Feb 2024 (14:53 IST)
ಬೆಂಗಳೂರು-ಫೆಬ್ರವರಿಯಲ್ಲಿ ವಾಡಿಕೆಗಿಂತ ಬಿಸಿಲು ಹೆಚ್ಚಾಗಿದೆ.ಎಲ್ ನಿನೋ ಪ್ರಭಾವದಿಂದ ಬೇಸಿಗೆಯ ಪ್ರಭಾವ ಹೆಚ್ಚಾಗಿದ್ದು,ಮಾರ್ಚ್,ಏಪ್ರಿಲ್ ನಲ್ಲಿ ಇನ್ನೂ ತಾಪಮಾನ ಹೆಚ್ಚಾಗಲಿದೆ.ಮತ್ತೆ ಬಿಸಿಲಿನ ಎಫೆಕ್ಟ್ ತಡೆಯಲಾರದೆ ಜನ ತತ್ತರಿಸಲಿದ್ದಾರೆ.ಮುಂದಿನ 2 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ತಾಪಮಾನ ಏರಿಕೆಯಾಗಲಿದೆ.ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರದಲ್ಲಿ 13.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.ಮಂಗಳೂರು ಏರ್ಪೋರ್ಟ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಶಿವಮೊಗ್ಗದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ತಜ್ಞ ಪ್ರಸಾದ್ ಹೇಳಿದ್ದಾರೆ.
geetha
Publish Date: Fri, 09 Feb 2024 (14:21 IST)
Updated Date: Fri, 09 Feb 2024 (14:53 IST)