Select Your Language

Notifications

webdunia
webdunia
webdunia
webdunia

ಬೇಸಿಗೆ ಮಳೆಗೇ ಅವಾಂತರ : ವಾಹನ ಸವಾರರ ಪರದಾಟ

ವಾಹನಗಳು
ರಾಮನಗರ , ಶನಿವಾರ, 18 ಮಾರ್ಚ್ 2023 (12:25 IST)
ರಾಮನಗರ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಮತ್ತೆ ಮಳೆ ಅವಾಂತರ ಸೃಷ್ಠಿಯಾಗಿದ್ದು ಹೆದ್ದಾರಿ ಜಲಾವೃತವಾಗಿದೆ. ರಾಮನಗರ ಸಮೀಪದ ಸಂಘಬಸವನ ದೊಡ್ಡಿ ಗ್ರಾಮದ ಸಮೀಪ ಹೆದ್ದಾರಿಯಲ್ಲಿ ಮಳೆ ನೀರು ನಿಂತಿದ್ದು ವಾಹನಸವಾರರು ಪರದಾಟ ನಡೆಸಿದ್ದಾರೆ.
 
ಕೆಲ ವಾಹನಗಳು ಕೆಟ್ಟು ನಿಂತಿದ್ದು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಹಿಡಿಶಾಪ ಹಾಕಿದ್ದಾರೆ. ದುಬಾರಿ ಟೋಲ್ ವಸೂಲಿ ಮಾಡುವ ಹೆದ್ದಾರಿ ಪ್ರಾಧಿಕಾರ ಸರಿಯಾಗಿ ಮಳೆ ನೀರು ಆಚೆ ಹೋಗುವ ವ್ಯವಸ್ಥೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮಳೆನೀರು ಸರಾಗವಾಗಿ ಹರಿದುಹೋಗದೆ ಅವಾಂತರ ಸೃಷ್ಟಿಯಾಗಿದ್ದು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಭದ್ರತಾ ಪಡೆ : ಉಗ್ರರ ಮೇಲೆ ಗುಂಡಿನ ದಾಳಿ