Webdunia - Bharat's app for daily news and videos

Install App

ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ - ಅಲೋಕ್​ ಕುಮಾರ್

Webdunia
ಮಂಗಳವಾರ, 29 ನವೆಂಬರ್ 2022 (18:56 IST)
ಬೆಳಗಾವಿಯಲ್ಲಿ ಕರ್ನಾಟಕ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನವು ಸುಸೂತ್ರವಾಗಿ ನಡೆಯಬೇಕು. ಇದು ಚುನಾವಣೆ ವರ್ಷವಾಗಿರುವ ಕಾರಣ ಕಿಡಗೇಡಿಗಳು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಅಲೋಕ್​ ಕುಮಾರ್  ತಿಳಿಸಿದ್ರು. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್​ ಕುಮಾರ್ ಅವರು. ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವ ಯಾವುದೇ ಚಟುವಟಿಕೆಗೆ ನಾವು ಅವಕಾಶ ಕೊಡುವುದಿಲ್ಲ. ಖಾಸಗಿ ಕಾರ್ಯಕ್ರಮಗಳಿಗೆ ಬಂದರೆ ನಮ್ಮ ಅಭ್ಯಂತರ ಇರುವುದಿಲ್ಲ. ಬೆಳಗಾವಿ ಗಡಿಯಲ್ಲಿ 21 ಚೆಕ್​ಪೋಸ್ಟ್​ಗಳಿವೆ. ಗಡಿ ಭಾಗದ ಎಲ್ಲ ಎಸ್‌ಪಿಗಳಿಗೆ ಎಚ್ಚರಿಕೆಯಿಂದ ಇರುವಂತೆ ನಿರ್ದೇಶನ ನೀಡಿದ್ದೇವೆ. ಮಹಾರಾಷ್ಟ್ರ ಗಡಿಯಲ್ಲಿ ಇಂದು ಸಂಜೆಯಿಂದಲೇ ಪೊಲೀಸರು ಗಸ್ತು ಹೆಚ್ಚಿಸುತ್ತಾರೆ ಎಂದರು. ಸಭೆಯಲ್ಲಿ ಉತ್ತರ ವಲಯ ಐಜಿಪಿ, ಬೆಳಗಾವಿ ಎಸ್​​ಪಿ, ನಗರ ಪೊಲೀಸ್​ ಆಯುಕ್ತ, ಡಿಸಿಪಿಗಳು, ಡಿವೈಎಸ್​ಪಿಗಳು ಭಾಗವಹಿಸಿದ್ದರು. ಮಹಾರಾಷ್ಟ್ರದ ಕೊಲ್ಹಾಪುರ ಐಜಿಪಿ, ಕೊಲ್ಹಾಪುರ ಎಸ್​​​ಪಿ, ಸಾಂಗ್ಲಿ ಎಸ್​ಪಿ, ಸಿಂಧುದುರ್ಗ ಎಸ್​​ಪಿ, ಸಾವಂತವಾಡಿಯ ಡಿಎಸ್​ಪಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments