Select Your Language

Notifications

webdunia
webdunia
webdunia
webdunia

ಉದ್ಯಮಿಗಳಾಯ್ತು, ಈಗ ಕ್ರಿಕೆಟಿಗರ ಸರದಿ: ಬೆಂಗಳೂರು ಟ್ರಾಫಿಕ್ ಬಗ್ಗೆ ಸುನಿಲ್ ಜೋಶಿ ಹೇಳಿದ್ದೇನು

Sunil Joshi

Krishnaveni K

ಬೆಂಗಳೂರು , ಶುಕ್ರವಾರ, 17 ಅಕ್ಟೋಬರ್ 2025 (11:20 IST)
Photo Credit: X
ಬೆಂಗಳೂರು: ಉದ್ಯಮಿಗಳ ಬಳಿಕ ಈಗ ಕ್ರಿಕೆಟಿಗರ ಸರದಿ. ಬೆಂಗಳೂರು ಟ್ರಾಫಿಕ್ ಬಗ್ಗೆ ಕರ್ನಾಟಕದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಟ್ವೀಟ್ ಮಾಡಿ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
 

ಇತ್ತೀಚೆಗೆ ಬೆಂಗಳೂರಿನ ರಸ್ತೆ ಪರಿಸ್ಥಿತಿ ಬಗ್ಗೆ ಉದ್ಯಮಿಗಳು ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಕ್ರಿಕೆಟಿಗ ಸುನಿಲ್ ಜೋಶಿ ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿನ ಟ್ರಾಫಿಕ್ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರನ್ನು ಪ್ರಶ್ನೆ ಮಾಡಿದ್ದಾರೆ.

‘ವಿಮಾನ ನಿಲ್ದಾಣ ಮಾರ್ಗದಲ್ಲಿ ದಿನದ ವೇಳೆಯಲ್ಲೂ ಸರಕು ಮತ್ತು ನಿರ್ಮಾಣ ವಾಹನಗಳನ್ನು ಹೇಗೆ ಅನುಮತಿಸಲಾಗುತ್ತಿದೆ? ಇವುಗಳಿಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಮಾತ್ರ ಚಾಲನೆಗೆ ಅನುಮತಿ ಇರಬೇಕು ಅಲ್ಲವೇ?

ಈಗ ಈ ವಾಹನಗಳು ಫಾಸ್ಟ್ ಲೇನ್‌ಗಳನ್ನು ಬಂದ್ ಮಾಡುತ್ತಿವೆ, ಇದರಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಅಥವಾ ಬರುವ ಪ್ರಯಾಣಿಕರಿಗೆ ಭಾರೀ ಟ್ರಾಫಿಕ್ ಜಾಮ್ ಆಗುತ್ತಿದೆ. ದಯವಿಟ್ಟು ಈ ಕುರಿತು ಕ್ರಮ ಕೈಗೊಳ್ಳಿ ಸರ್, ಸಾಮಾನ್ಯ ಜನರು ಪ್ರಯಾಣಿಸಲು ತುಂಬಾ ಕಷ್ಟ ಅನುಭವಿಸುತ್ತಿದ್ದಾರೆ’ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ