Publish Date: Wed, 07 Jan 2026 (20:48 IST)
Updated Date: Wed, 07 Jan 2026 (20:52 IST)
ಹಾವೇರಿ: ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ವನ್ನು ನೆರವೇರಿಸಿ ಮಾತನಾಡಿದರು.
ಕಳೆದ ಬಾರಿ ಸಿಎಂ ಆಗಿದ್ದ ವೇಳೆ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಘೋಷಿಸಿದ್ದೆ. ಉಪಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಘೋಷಣೆ ಮಾಡಿದ್ದೆ ಎಂದು ಸ್ಮರಿಸಿದರು.
ಇಂದು ಕರ್ನಾಟಕದಲ್ಲಿ ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರಕಾರಿ ವೈದ್ಯಕೀಯ ಕಾಲೇಜುಗಳಿವೆ.