Select Your Language

Notifications

webdunia
webdunia
webdunia
webdunia

ಸೂಪರ್ ಸ್ಟಾರ್ ರಜನಿಕಾಂತ್‍ರನ್ನು ರಾಜ್ಯಪಾಲರನ್ನಾಗಿಸಲು ಚಿಂತನೆ..!

webdunia
bangalore , ಶನಿವಾರ, 20 ಆಗಸ್ಟ್ 2022 (13:49 IST)
ಇತ್ತೀಚೆಗೆ ಸಂಗೀತ ಮಾಂತ್ರಿಕ ಇಳಯರಾಜಾರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಇದೀಗ ಸೂಪರ್ ಸ್ಟಾರ್ ರಜನಿಕಾಂತ್‍ರನ್ನು ರಾಜ್ಯಪಾಲರನ್ನಾಗಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಹಿಂದೆ ಹಲವು ಬಾರಿ ರಾಜಕೀಯಕ್ಕೆ ಬರುವ ಸುಳಿವು ಕೊಟ್ಟಿದ್ದ ರಜನಿಕಾಂತ್ ಕಡೆ ಕ್ಷಣದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು. ಮೊನ್ನೆ ಕೆಂಪುಕೋಟೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ರಜನಿಕಾಂತ್, ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಹಲವರನ್ನು ಭೇಟಿ ಮಾಡಿದ್ರು. ಇದಕ್ಕೂ ಮುನ್ನ, ತಮಿಳುನಾಡು ರಾಜ್ಯಪಾಲರನ್ನು ರಜನಿಕಾಂತ್ ಭೇಟಿ ಮಾಡಿದ್ದರು. ಈ ಭೇಟಿಯಲ್ಲಿ ಸದ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾಗಿ ತಿಳಿಸಿದ್ದರು. ಆದರೆ, ನೇರವಾಗಿ ರಾಜಕೀಯಕ್ಕೆ ರಜನಿಕಾಂತ್ ಬರಲು ಒಪ್ಪದ ಕಾರಣ ಅವರನ್ನು ರಾಜ್ಯಪಾಲರನ್ನಾಗಿಸಲು ಬಿಜೆಪಿ ಪ್ಲಾನ್ ಮಾಡಿದೆ. ಇದಕ್ಕೆ ರಜನಿಕಾಂತ್ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹಬ್ಬಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಳಾಗಿದ್ದ ಬಸ್ ತಂಗುದಾಣಕ್ಕೆ ಜೀವ ಕಳೆ..!