ಲಿಂಗಾಯುತ ಪ್ರತ್ಯೇಕ ಧರ್ಮಕ್ಕೆ ಸಿದ್ದಗಂಗಾ ಶ್ರೀಗಳ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಜಯಮೃತ್ತುಂಜಯ ಸ್ವಾಮಿಗಳು ಹೇಳಿದ್ದಾರೆ.
ಸಿದ್ದಗಂಗಾ ಶ್ರೀಗಳು ಬಸವಣ್ಣನವರ ತತ್ವ ಪಾಲಿಸುವ ಧರ್ಮವಾದ ಲಿಂಗಾಯುತ ಧರ್ಮಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಐಎಎಸ್ ಅಧಿಕಾರಿ ಶಿವಾನಂದ ಜಾಮದಾರ್, ಲಿಂಗಾಯುತ ಧರ್ಮ 12ನೇ ಶತಮಾನದಿಂದಿರುವುದರಿಂದ ಪ್ರತ್ಯೇಕ ಲಿಂಗಾಯುತ ಧರ್ಮವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ರಂಭಾಪುರಿ ಶ್ರೀಗಳು ವೀರಶೈವ ಮತ್ತು ಲಿಂಗಾಯುತ ಧರ್ಮ ಒಂದೇ ಆಗಿರುವುದರಿಂದ ಪ್ರತ್ಯೇಕ ಧರ್ಮ ಎಂದು ಪರಿಗಣಿಸುವುದು ಸರಿಯಲ್ಲ ಎಂದು ಅಭಿಪ್ರಾಪಟ್ಟರು.
ರಾಜ್ಯದಲ್ಲಿ ಮೂರು ಸಾವಿರ ಮಠಗಳಿರುವುದರಿಂದ ಮುಂಬರುವ ದಿನಗಳಲ್ಲಿ ಸ್ವಾಮಿಗಳು ಚರ್ಚಿಸಿ ಒಮ್ಮತದ ನಿರ್ಧಾರಕ್ಕೆ ಬರುವ ವಿಶ್ವಾಸವಿದೆ ಎಂದು ಇತರ ಮುಖಂಡರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.