Publish Date: Wed, 03 Apr 2019 (15:00 IST)
Updated Date: Wed, 03 Apr 2019 (15:02 IST)
ಬೆಂಗಳೂರು : ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರಿಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ಬೆಂಬಲ ನೀಡಿದ್ದಾರೆ ಎಂಬ ಆರೋಪಕ್ಕೆ ಇದೀಗ ಎನ್. ಚಲುವರಾಯಸ್ವಾಮಿ ಖಡಕ್ ಉತ್ತರ ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ, ನಾನು ಸುಮಲತಾ ಅವರಿಗೆ ಬೆಂಬಲ ನೀಡುವುದಾಗಿ ಎಲ್ಲಿಯೂ ಹೇಳಿಲ್ಲ. ಯಾರು ಹೇಳಿದ್ದಾರೆಯೋ ಅವರೇ ಅದನ್ನು ಸಾಬೀತು ಮಾಡಲಿ ಎಂದು ಹೇಳಿದ್ದಾರೆ.
ಹಾಗೇ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ನಮ್ಮನ್ನು ಯಾವುದೇ ಸಭೆ, ಸಮಾರಂಭಗಳಿಗೆ ಆಹ್ವಾನಿಸಿಲ್ಲ. ಅವರೆಲ್ಲ ದೊಡ್ಡವರು, ಆನೆ ಇದ್ದಂತೆ, ನಾವು ಇಲಿಗಳು. ಅವರ ಪ್ರಶ್ನೆ, ಹೇಳಿಕೆಗಳಿಗೆ ಪ್ರತಿಕ್ರಿಯಿಸುವಷ್ಟು ನಾವು ದೊಡ್ಡವರಲ್ಲ. ಅವರಿಗೂ ನಮಗೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಜೆಡಿಎಸ್ ನಾಯಕರಿಗೆ ಚೆಲುವರಾಯಸ್ವಾಮಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.