ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಇನ್ನೂ ನಾಮಪತ್ರ ಸಲ್ಲಿಕೆಗೆ ಬಿಸಿಲು ಲೆಕ್ಕಿಸದೇ ಹೆಜ್ಜೆ ಹಾಕಿದ ಬೆಂಬಲಿಗರು, ಮೋದಿ ಮತ್ತೊಮ್ಮೆ ಎಂದು ಘೋಷಷಣೆಯನ್ನು ಕೂಗಿದರು. ಬಿಜೆಪಿ ಜೆಡಿಎಸ್ ಬೆಂಬಲಿಗರ ಬೃಹತ್ ಮೆರವಣಿಗೆ ಚುನಾವಣೆಗೆ ಮುನ್ನವೇ ಮೈತ್ರಿ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಇಂದು ಮುಂಜಾನೆ ರಾಮಣ್ಣಶ್ರೇಷ್ಠಿ ಪಾರ್ಕ್ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಅಲ್ಲಿಂದಲೇ ಮೆರವಣಿಗೆಯಲ್ಲಿ ತೆರಳಿ ಗಾಂಧಿ ಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ಸರ್ಕಲ್ ಮೂಲಕ ಮೆರವಣಿಗೆ ಸಾಗಿ ಜಿಲ್ಲಾಧಿಕಾರಿ ತಲುಪಿದರು.
ಜಿಲ್ಲಾ ಚುನಾವಣಾಧಿಕಾರಿಯೂ ಅಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಈ ಬಗ್ಗೆ ರಾಘವೇಂದ್ರ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಲಾಯಿತು.
ನನ್ನ ಪತ್ನಿ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಹಾಗೂ ಬಿಜೆಪಿ-ಜೆಡಿಎಸ್ ಮುಖಂಡರುಗಳಾದ ಶ್ರೀ @JnanendraAraga
ಶ್ರೀ ಭಾನುಪ್ರಕಾಶ್, ಶ್ರಿ ರುದ್ರೇಗೌಡ, ಶ್ರೀ ಹರತಾಳು ಹಾಲಪ್ಪ, ಶ್ರೀಮತಿ ಶಾರದಾ ಪೂರ್ಯಾನಾಯ್ಕ್, ಶ್ರೀ ಕೆ.ಬಿ.ಅಶೋಕ್ ನಾಯ್ಕ್, ಶ್ರೀ @gantihole
ಮತ್ತಿತರರು ಉಪಸ್ಥಿತರಿದ್ದರು.