Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಅಸ್ತು ಎಂದ ಸುಪ್ರೀಂ

ಕಾವೇರಿ ವಿವಾದ: ಮೇಲ್ಮನವಿ ಅರ್ಜಿಗಳ ವಿಚಾರಣೆಗೆ ಅಸ್ತು ಎಂದ ಸುಪ್ರೀಂ
ನವದೆಹಲಿ , ಶುಕ್ರವಾರ, 9 ಡಿಸೆಂಬರ್ 2016 (11:17 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯಗಳು ಸಲ್ಲಿಸಿದ ಮೇಲ್ಮನವಿ ವಿಚಾರಣೆಗೆ ಅರ್ಹ ಎಂದು ಸುಪ್ರೀಂಕೋರ್ಟ್ ಪ್ರಕಟಿಸಿದೆ.
ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳು ಸಲ್ಲಿಸಿದ ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಅಸ್ತು ಎಂದು ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ಅಮಿತಾವ್ ರಾಯ್ ಹಾಗೂ ಎ.ಎಂ.ಖಾನ್ ವಿಲ್ಕರ್ ನೇತೃತ್ವದ ಪೀಠ ಪ್ರಕಟಿಸಿದ್ದು, ಡಿಸೆಂಬರ್ 15 ರಿಂದ ಅರ್ಜಿಗಳ ವಿಚಾರಣೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
 
ಕಾವೇರಿಯಿಂದ ತಮಿಳುನಾಡಿಗೆ 2 ಸಾವಿರ ಕ್ಯೂಸೆಕ್ ನೀರು....
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಮಧ್ಯಂತರ ಆದೇಶವನ್ನು ಮುಂದುವರೆಸಿರುವ ಸುಪ್ರೀಂಕೋರ್ಟ್ ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ ಕಲಾಪಕ್ಕೆ ಅಡ್ಡಿ: ಛೀಮಾರಿ ಹಾಕಿದ ರಾಷ್ಟ್ರಪತಿ