Select Your Language

Notifications

webdunia
webdunia
webdunia
webdunia

ಕಾವೇರಿ ಸುಪ್ರೀಂಕೋರ್ಟ್ ತೀರ್ಪಿಗೆ ಅಸಮಾಧಾನ: ಸಂಸದ ಸ್ಥಾನಕ್ಕೆ ಪುಟ್ಟರಾಜು ರಾಜೀನಾಮೆ

ಕಾವೇರಿ ನೀರು ಹಂಚಿಕೆ
ಮಂಡ್ಯ , ಮಂಗಳವಾರ, 20 ಸೆಪ್ಟಂಬರ್ 2016 (17:55 IST)
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ವಿರೋಧಿಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
 
ಸುಪ್ರೀಂಕೋರ್ಟ್‌ನಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ವಿರೋಧಿಸಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಯಾವುದೇ ಕಾರಣಕ್ಕೂ ರಾಜ್ಯದ ರೈತರಿಗೆ ಅನ್ಯಾಯವಾಗುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಒಂದೆರೆಡು ದಿನಗಳಲ್ಲಿ ದೆಹಲಿಗೆ ತೆರಳುತ್ತಿದ್ದು, ಲೋಕಸಭೆಯ ಸಭಾಪತಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
 
ಸುಪ್ರೀಂಕೋರ್ಟ್ ತೀರ್ಪು ನಮಗೆ ಆಘಾತ ತಂದಿದೆ. ಒಕ್ಕೂಟದ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಎಷ್ಟು ವರ್ಷಗಳ ಕಾಲ ಅನ್ಯಾಯ ಸಹಿಸುವುದು. ಇನ್ಮುಂದೆ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಘೋಷಿಸಿದರು.
 
ಕಾಶ್ಮಿರ ಕಣಿವೆಯ ಶಾಸಕರು ಮತ್ತು ಸಂಸದರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾವೇರಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಸಿ.ಎಸ್.ಪುಟ್ಟರಾಜು ಕರೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಸುಪ್ರೀಂ ತೀರ್ಪು: ಇಂದು ಅತ್ಯಂತ ಕರಾಳ ದಿನ ಎಂದ ಕುಮಾರಸ್ವಾಮಿ