Select Your Language

Notifications

webdunia
webdunia
webdunia
webdunia

ಕರುನಾಡಿಗೆ ಮತ್ತೆ ಆಘಾತ: ಪ್ರತಿದಿನ 12 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ

ಕನ್ನಡ ಪ್ರಾದೇಶಿಕ
ಬೆಂಗಳೂರು , ಸೋಮವಾರ, 12 ಸೆಪ್ಟಂಬರ್ 2016 (12:26 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೊಮ್ಮೆ ಮುಖಭಂಗವಾಗಿದ್ದು, ಕಾವೇರಿ ನದಿಯಿಂದ ಸೆಪ್ಟೆಂಬರ್ 20 ರವರೆಗೆ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. 
 
ತಮಿಳುನಾಡಿಗೆ ನೀರು ಬಿಡುವಂತೆ ಹೊರಡಿಸಿದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸೆಪ್ಟೆಂಬರ್ 10ರಂದು ರಾಜ್ಯ ಸರಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. 
 
ಕರ್ನಾಟಕ ಸರಕಾರ ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂಕೋರ್ಟ್ ಸೆಪ್ಟೆಂಬರ್ 20ರವರೆಗೂ ಪ್ರತಿ ದಿನ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿ ಉದಯ್ ಲಲಿತ್ ನೇತೃತ್ವದ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ. 
 
ಈ ಹಿಂದೆ ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕೋರ್ಟ್ ಆದೇಶ ನೀಡಿತ್ತು. ಆದರೆ, ಇದೀಗ ಪ್ರತಿದಿನ 3 ಸಾವಿರ ಕ್ಯೂಸೆಕ್ ಕಡಿಮೆ ಮಾಡಿ ನಾಲ್ಕು ದಿನಗಳನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. 
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಪರವಾಗಿ ವಾದ ಮಂಡಿಸುವ ಹಿರಿಯ ವಕೀಲ ನಾರಿಮನ್ ಅವರು ವಾದ ಮಂಡನೆಯಲ್ಲಿ ಮತ್ತೊಮ್ಮೆ ವಿಫಲರಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಭೇಟಿಯಿಂದ ಪ್ರಧಾನಿ ಬಟ್ಟೆ ಕೊಳೆ: ರಾಹುಲ್ ಗಾಂಧಿ