Publish Date: Thu, 12 Dec 2019 (15:30 IST)
Updated Date: Thu, 12 Dec 2019 (15:32 IST)
ಹೈದ್ರಾಬಾದ್ ನಲ್ಲಿ ಪಶು ವೈದ್ಯೆಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಬೆಂಕಿ ಹಚ್ಚಿ ಕೊಲೆ ಮಾಡಿರೋ ಆರೋಪಿಗಳು ಪೊಲೀಸರ ಗುಂಡಿಗೆ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರೋ ಬಗ್ಗೆ ನ್ಯಾಯಾಂಗ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಆರು ತಿಂಗಳೊಳಗಾಗಿ ತನಿಖೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ. ಅಲ್ಲದೇ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ವಿ.ಎಸ್.ಸಿರ್ಪೂರಕರ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಕೈಗೊಳ್ಳುವಂತೆ ತಿಳಿಸಿದೆ.
ಪ್ರಕರಣದ ಸತ್ಯಾಂಶ ಬಯಲಿಗೆ ಬರಬೇಕಿದೆ. ಹೀಗಾಗಿ ನ್ಯಾಯಾಂಗ ತನಿಖೆಗೆ ಅಗತ್ಯವಿದೆ ಅಂತ ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.