Select Your Language

Notifications

webdunia
webdunia
webdunia
webdunia

ಗೋರಿಪಾಳ್ಯವನ್ನು ಪಾಕ್‌ಗೆ ಹೋಲಿಸಿದ ನ್ಯಾಯಾಧೀಶ ವಿ ಶ್ರೀಶಾನಂದಗೆ ಸುಪ್ರೀಂ ತರಾಟೆ

ಗೋರಿಪಾಳ್ಯವನ್ನು ಪಾಕ್‌ಗೆ ಹೋಲಿಸಿದ ನ್ಯಾಯಾಧೀಶ ವಿ ಶ್ರೀಶಾನಂದಗೆ ಸುಪ್ರೀಂ ತರಾಟೆ

Sampriya

ಬೆಂಗಳೂರು , ಬುಧವಾರ, 25 ಸೆಪ್ಟಂಬರ್ 2024 (15:06 IST)
Photo Courtesy X
ಬೆಂಗಳೂರು: ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ್ದ ಕರ್ನಾಟ ಹೈಕೋರ್ಟ್ ನ್ಯಾಯಾಧೀಶ ವಿ ಶ್ರೀಶಾನಂದ ಅವರನ್ನು ಸುಪ್ರಿಂಕೋರ್ಟ್  ತರಾಟೆಗೆ ತೆಗೆದುಕೊಂಡಿದೆ.

ಏನಿದು ವಿಚಾರ: ಪ್ರಕರಣ ವಿಚಾರಣೆ ವೇಳೆ  ಮೈಸೂರು ರಸ್ತೆ ಮೇಲ್ಸೇತುವೆ ಬಳಿ ಹೋಗಿ ನೋಡಿ, ಪ್ರತಿ ಆಟೊ ರಿಕ್ಷಾದಲ್ಲಿ 10 ಮಂದಿ ಇರುತ್ತಾರೆ. ಅಲ್ಲಿ ಯಾವುದೂ ಅನ್ವಯವಾಗುವುದಿಲ್ಲ. ಯಾಕೆಂದರೆ ಕೆಆರ್​​ ಮಾರುಕಟ್ಟೆ ಮತ್ತು ಗೋರಿಪಾಳ್ಯವರೆಗೆ ಮೈಸೂರು ರೋಡ್ ಫ್ಲೈಓವರ್ ಪಾಕಿಸ್ತಾನದಲ್ಲಿದೆ, ಭಾರತದಲ್ಲಿಲ್ಲ. ಇದು ವಾಸ್ತವ. ನೀವು ಎಂಥವನೇ ಸ್ಟ್ರಿಕ್ಟ್ ಅಧಿಕಾರಿಗಳನ್ನು ಅಲ್ಲಿಗೆ ಹಾಕಿ, ಹಿಡಿದರೆ ನೋಡ್ತೀನಿ ಎಂದು ನ್ಯಾಯಾಧೀಶರು ಹೇಳಿದ್ದರು.

ನ್ಯಾಯಾಧೀಶರು ಹೇಳಿಕೆ ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು. ಈ ಸಂಬಂಧ ಸುಪ್ರೀಂಕೋರ್ಟ್‌ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಳ್ಳುತ್ತಿದ್ದ ಹಾಗೇ ನ್ಯಾಯಾಧೀಶ ವಿ ಶ್ರೀಶಾನಂದ ಕ್ಷಮೆಯಾಚಿಸಿದರು.

ಈ ವಿಚಾರಣವನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್‌, ನೀವು ಭಾರತದ ಯಾವುದೇ ಭಾಗವನ್ನು 'ಪಾಕಿಸ್ತಾನ' ಅಂತ ಕರೆಯುವಂತಿಲ್ಲ. ಇದು ದೇಶದ ಪ್ರಾದೇಶಿಕ ಸಮಗ್ರತೆಗೆ ವಿರುದ್ಧವಾಗಿದೆ. ನಿಮ್ಮ ಹೇಳಿಕೆಯನ್ನು ಸಮ್ಮತಿಸುವುದಿಲ್ಲ. ನಿಮ್ಮ ಕ್ಷಮೆಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ  ಎಂದು ಸುಪ್ರೀಂಕೋರ್ಟ್​ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

14 ಜಿಲ್ಲೆಗಳಲ್ಲಿ ಸಿಟಿ, ಎಂಆರ್ ಐ ಸ್ಕ್ಯಾನ್ ಸ್ಥಗಿತ: ಬಿಲ್ ಪಾವತಿಗೂ ಸರ್ಕಾರದ ಬಳಿ ದುಡ್ಡಿಲ್ವಾ