ಮೈಸೂರು: ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿದೆ.
ಈ ಹಿಂದೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂರು ಅರ್ಜಿಗಳು ಇದೇ ವಿಚಾರವಾಗಿ ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದವು. ಆದರೆ ಇವೆಲ್ಲವೂ ತಿರಸ್ಕೃತಗೊಂಡಿದ್ದವು. ಈ ಹಿನ್ನಲೆಯಲ್ಲಿ ಪ್ರತಾಪ್ ಸಿಂಹ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಆದರೆ ಸುಪ್ರೀಂಕೋರ್ಟ್ ಕೂಡಾ ಈ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರ ಪರವಾಗಿ ವಕೀಲರು ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ ಕೊಡಬಾರದು ಎಂದು ವಾದಿಸಿದ್ದಾರೆ. ದೇವಸ್ಥಾನದ ಒಳಗೆ ಪೂಜೆ ಮಾಡುವುದು ಜಾತ್ಯಾತೀತ ಅಲ್ಲ . ಈಗ ಉದ್ಘಾಟನೆಗೆ ನಿಯೋಜನೆಯಾಗಿರುವವರು ಈ ಹಿಂದೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ವಾದ ಮಂಡಿಸಿದ್ದರು.
ಆದರೆ ವಕೀಲರ ಮನವಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ಅರ್ಜಿ ವಜಾಗೊಳಿಸಿದೆ. ಇದರೊಂದಿಗೆ ಬಾನು ಮುಷ್ತಾಪ್ ದಸರಾ ಉದ್ಘಾಟನೆ ಮಾಡುವುದರ ಬಗ್ಗೆ ಇದ್ದ ವಿವಾದಗಳಿಗೆ ಸದ್ಯಕ್ಕೆ ಬ್ರೇಕ್ ಹಾಕಿದಂತಾಗಿದೆ.