Publish Date: Tue, 19 Dec 2023 (18:42 IST)
Updated Date: Tue, 19 Dec 2023 (19:05 IST)
ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ರೋಹಿಣಿ ಸಿಂಧೂರಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ್ದ, ವಿವಾದಾಸ್ಪದ ಪೋಸ್ಟ್‌ಗಳನ್ನು ತೆಗೆಯಲು ನೀಡಿದ್ದ ಆದೇಶಕ್ಕೆ ಅನುಗುಣವಾಗಿ ರೂಪಾ ಅವರು ಪ್ರಮಾಣಪತ್ರ ಸಲ್ಲಿಸಿದ ನಂತರ, ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ.