‘ಲೋಕಾ’ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

Webdunia
ಮಂಗಳವಾರ, 14 ಮಾರ್ಚ್ 2023 (15:56 IST)
BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿರುವ ಲೋಕಾಯುಕ್ತದ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿದೆ. ಮುಖ್ಯ ನ್ಯಾಯಮೂರ್ತಿ D.Y. ಚಂದ್ರಚೂಡ್ ಪೀಠದ ಮುಂದೆ ತುರ್ತು ವಿಚಾರಣೆಗೆ ಲೋಕಾಯುಕ್ತ ವಕೀಲರು ಮನವಿ ಮಾಡಿದ್ದರು. ಆದರೆ, ಸಾಂವಿಧಾನಿಕ ಪೀಠದ ಪ್ರಕರಣಗಳ ಕುರಿತಂತೆ ವಿಚಾರಣೆ ನಡೆಸುತ್ತಿರುವುದರಿಂದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠದ ಮುಂದೆ ವಿಷಯ ಪ್ರಸ್ತಾಪಿಸಲು CJI ಸೂಚಿಸಿದರು. ತಕ್ಷಣ ನ್ಯಾಯಮೂರ್ತಿ ಕೌಲ್ ನೇತೃತ್ವದ ಪೀಠಕ್ಕೆ ಧಾವಿಸಿದ ಲೋಕಾಯುಕ್ತ ಪರ ವಕೀಲರು, ತುರ್ತು ವಿಚಾರಣಾ ಪಟ್ಟಿಗೆ ಸೇರಿಸಲು ಮನವಿ ಮಾಡಿದರು. ಆದರೆ, ಅರ್ಜಿಯ ಶೀಘ್ರ ಇತ್ಯರ್ಥದ ಅಗತ್ಯ ಏನು ಎಂದು ನ್ಯಾಯಮೂರ್ತಿ ಕೌಲ್, ವಕೀಲರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ವಕೀಲರು, ಆರೋಪಿಯು ಹಾಲಿ ಶಾಸಕರಾಗಿದ್ದು, ಅವರ ಬಳಿಯಿದ್ದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
 
ವಕೀಲರ ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಕೌಲ್, ಸಾಧ್ಯವಾದಷ್ಟು ಬೇಗ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಂತೆ ಸೂಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

ಮುಂದಿನ ಸುದ್ದಿ
Show comments