ವಿಕೃತಕಾಮಿ ಹಾಗೂ ಸರಣಿ ಹಂತಕ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ವಿಕೃತವಾಗಿ ಕೊಲೆ ಮಾಡುತ್ತಿದ್ದ ಉಮೇಶ್ ರೆಡ್ಡಿಗೆ ಪೆ.18, 2009 ರಲ್ಲಿ ಕರ್ನಾಟಕ ಹೈಕೋರ್ಟ್ ಗಲ್ಲು ಶಿಕ್ಷೆ ವಿಧಿಸಿ ವಿಧಿಸಿತ್ತು. ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್, ರೆಡ್ಡಿಗೆ ಗಲ್ಲು ಶಿಕ್ಷೆ ಕಾಯಂ ಗೊಳಿಸಿದೆ.
1998 ರಲ್ಲಿ ಜಯಶ್ರೀ ಎಂಬ ಮಹಿಳೆಯ ಕೈ ಕಾಲು ಕಟ್ಟಿ ಅತ್ಯಾಚಾರ ಎಸಗಿದ್ದ ಉಮೇಶ್ ರೆಡ್ಡಿ, ಬಳಿಕ ಆಕೆಯನ್ನು ಕೊಂದು ಮನೆಯಲ್ಲಿದ್ದ ಆಭರಣ ದೋಚಿಕೊಂಡು ಪರಾರಿಯಾಗಿದ್ದ. ಇನ್ನೊಂದು ಮನೆಯಲ್ಲೂ ಇದೆ ಕೃತ್ಯ ಎಸಗಲು ಯತ್ನಿಸಿದಾಗ ಆತನನ್ನು ಬಂಧಿಸಲಾಗಿತ್ತು.
ಸುದೀರ್ಘ 8 ವರ್ಷಗಳ ವಿಚಾರಣೆ ನಡೆಸಿದ ಸೆಷನ್ಸ್ ಕೋರ್ಟ್ 2006ರ ಅಕ್ಟೋಬರ್ ತಿಂಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ