Select Your Language

Notifications

webdunia
webdunia
webdunia
webdunia

ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ

ಸೂರಜ್ ರೇವಣ್ಣಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ

Sampriya

ಬೆಂಗಳೂರು , ಬುಧವಾರ, 3 ಜುಲೈ 2024 (17:41 IST)
ಬೆಂಗಳೂರು: ಯುವಕನಿಗೆ ನೀಡಿದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣಗೆ ಜು.18 ರ ವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್‌ ರೇವಣ್ಣಗೆ ಮತ್ತೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಡಿ ಬಂಧಿತರಾಗಿರುವ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಿದ್ದು, ಅದರಂತೆ ಅವರನ್ನು ನ್ಯಾಯಧೀಶರೆದುರು ಹಾಜರುಪಡಿಸಿದ್ದಾರೆ.

ಅವರನ್ನು ಎರಡು ಬಾರಿ ಎಸ್‌ಐಟಿ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಜುಲೈ 18ರ ವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ.  

ಸೂರಜ್‌ ರೇವಣ್ಣರನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಜೂ.22 ರಂದು ಬಂಧಿಸಿದ್ದರು. ನಂತರ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಚಾರಣ ಪ್ರಿಯರಿಗೆ ಗುಡ್‌ನ್ಯೂಸ್‌, ಆನ್‌ಲೈನ್‌ನಲ್ಲೇ ಸಿಗಲಿದೆ ಟಿಕೆಟ್