Select Your Language

Notifications

webdunia
webdunia
webdunia
webdunia

ಸೂರಜ್‌ ರೇವಣ್ಣಗೆ ಕೊನೆಗೂ ಸಿಕ್ತು ಜೈಲಿಂದ ಬಿಡುಗಡೆ ಭಾಗ್ಯ

ಸೂರಜ್‌ ರೇವಣ್ಣಗೆ ಕೊನೆಗೂ ಸಿಕ್ತು ಜೈಲಿಂದ ಬಿಡುಗಡೆ ಭಾಗ್ಯ

Sampriya

ಬೆಂಗಳೂರು , ಸೋಮವಾರ, 22 ಜುಲೈ 2024 (16:51 IST)
ಬೆಂಗಳೂರು:ಅಸಹಜ ಲೈಂಗಿ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಜಾಮೀನು ಮಂಜೂರಾಗಿದೆ.

ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ನಡೆಸಿತು. ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಸೂರಜ್ ರೇವಣ್ಣಗೆ ಕೊಂಚ ರಿಲ್ಯಾಕ್ಸ್ ಆಗಿದ್ದಾರೆ.

ಪ್ರಕರಣದ ಹಿನ್ನೆಲೆ: ಹೊಳೆನರಸೀಪುರದಲ್ಲಿ ಘನ್ನಿಗಡ ಫಾರ್ಮ್ ಹೌಸ್​ಗೆ ಜೂನ್ 16ರಂದು ಕರೆಯಿಸಿಕೊಂಡು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಯುವಕ ಜೂನ್ 22ರಂದು ಸೂರಜ್ ಹಾಗೂ ಶಿವಕುಮಾರ್ ಎಂಬವರ ವಿರುದ್ಧ ದೂರು ನೀಡಿದ್ದರು.  ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಪೊಲೀಸ್​​ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರಜ್ ಬಂಧನವಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

Central Budget 2024: ನಿರ್ಮಲಾ ಸೀತಾರಾಮನ್ ಎಷ್ಟು ಗಂಟೆಗೆ ಬಜೆಟ್ ಮಂಡಿಸಲಿದ್ದಾರೆ ಇಲ್ಲಿದೆ ವಿವರ