ಬೆಂಗಳೂರು:ಅಸಹಜ ಲೈಂಗಿ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ.
ಅಸಹಜ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ನಡೆಸಿತು. ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಈ ಮೂಲಕ ಸೂರಜ್ ರೇವಣ್ಣಗೆ ಕೊಂಚ ರಿಲ್ಯಾಕ್ಸ್ ಆಗಿದ್ದಾರೆ.
ಪ್ರಕರಣದ ಹಿನ್ನೆಲೆ: ಹೊಳೆನರಸೀಪುರದಲ್ಲಿ ಘನ್ನಿಗಡ ಫಾರ್ಮ್ ಹೌಸ್ಗೆ ಜೂನ್ 16ರಂದು ಕರೆಯಿಸಿಕೊಂಡು ಸೂರಜ್ ರೇವಣ್ಣ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಯುವಕ ಜೂನ್ 22ರಂದು ಸೂರಜ್ ಹಾಗೂ ಶಿವಕುಮಾರ್ ಎಂಬವರ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಸೂರಜ್ ಬಂಧನವಾಗಿದೆ.