ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತಕ್ಕೆ ಒಳಗಾಗುತ್ತಿದ್ದಂತೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಿಸದೇ ನಿಧರಾಗಿರೋದಾಗಿ ತಿಳಿದು ಬಂದಿದೆ.ಹೃದಯಾಘಾತದಿಂದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ.
ರಾಜ್ಯ ಸರ್ಕಾರದಿಂದ ಮೊನ್ನಯಷ್ಟೇ ನಿಗಮ-ಮಂಡಳಿ ನೇಮಕಾತಿ ಆದೇಶ ಮಾಡಲಾಗಿತ್ತು. ಈ ವೇಳೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಸುರಪುರ ಶಾಸಕ ರಾಜ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನವನ್ನು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪಡೆದರು. ನಗರದ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಶಾಸಕಚರಾಜ ವೆಂಕಟಪ್ಪ ನಾಯಕ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು. ಶಾಸಕ ರಾಜಾ ವೆಂಕಟಪ್ಪ ನಾಯಕ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.