Publish Date: Sat, 29 Oct 2022 (15:01 IST)
Updated Date: Sat, 29 Oct 2022 (17:02 IST)
ಧಾರವಾಡ : ಈ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಜ್ಜಾಗಿದ್ದಾರೆ.
ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದು ಖಚಿತ. ಬಿಜೆಪಿಯವರು ಟಿಕೆಟ್ ಕೊಡಲು ಬಂದರೂ ನಾನು ಪಡೆದುಕೊಳ್ಳುವುದಿಲ್ಲ. ಸ್ವತಂತ್ರನಾಗಿ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ.
ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಏಳೆಂಟು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಕ್ಕಾಗಿ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂಬುದನ್ನು ಶೀಘ್ರವೇ ಬಹಿರಂಗಪಡಿಸುವುದಾಗಿ ತಿಳಿಸಿದ್ದಾರೆ.