Select Your Language

Notifications

webdunia
webdunia
webdunia
webdunia

ಮಹದಾಯಿಯಿಂದ ಒಂದು ಹನಿಯೂ ನೀರು ಬಿಡುವುದಿಲ್ಲ: ಸೋನಿಯಾ ಹೇಳಿಕೆ ಪ್ರಸ್ತಾಪಿಸಿದ ಅಂಗಡಿ

ಮಹದಾಯಿಯಿಂದ ಒಂದು ಹನಿಯೂ ನೀರು ಬಿಡುವುದಿಲ್ಲ: ಸೋನಿಯಾ ಹೇಳಿಕೆ ಪ್ರಸ್ತಾಪಿಸಿದ ಅಂಗಡಿ
ನವದೆಹಲಿ , ಗುರುವಾರ, 28 ಜುಲೈ 2016 (14:47 IST)
ಮಹದಾಯಿಯಿಂದ ಒಂದು ಹನಿಯೂ ನೀರು ಬಿಡುವುದಿಲ್ಲ ಎಂದು 2006 ರ ಸಾಲಿನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೇಳಿದ್ದರು ಎಂದು ಬಿಜೆಪಿ ಸಂಸದ ಸುರೇಶ್ ಅಂಗಡಿ ಆರೋಪಿಸಿದ್ದಾರೆ.
 
ಸಂಸದ ಸುರೇಶ ಅಂಗಡಿ ಆರೋಪಕ್ಕೆ ಸಂಸದ ಪ್ರಕಾಶ್ ಹುಕ್ಕೇರಿ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು.
 
ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕಕ್ಕೆ ಹಿನ್ನೆಡೆಯಾದ ಹಿನ್ನೆಲೆಯಲ್ಲಿ ಇಂದು ಲೋಕಸಭೆಯಲ್ಲಿ ಸಂಸದ ಪ್ರಕಾಶ್ ಹುಕ್ಕೇರಿ ಮಹದಾಯಿ ವಿಚಾರವನ್ನು ಪ್ರಸ್ತಾಪಿಸಿದರು.
 
ಮಹದಾಯಿ ನ್ಯಾಯಾಧಿಕರಣದ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು ಎಂದು ಆಗ್ರಹಿಸಿದರು.
 
ಮಹದಾಯಿ ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಧಿಕರಣದ ಹೊರಗಡೆಯೇ ಪರಿಹರಿಸಬೇಕು. ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಯವರೊಂದಿಗೆ ಸಭೆ ಕರೆದು ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ.
 
ನಿನ್ನೆ ಮಹದಾಯಿ ನ್ಯಾಯಾಧಿಕರಣ ಕರ್ನಾಟಕ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗುತ್ತಿದೆ. ಕೂಡಲೇ ಪ್ರಧಾನಿ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲಿ ಎಂದು ಸಂಸದ ಪ್ರಕಾಶ್ ಹುಕ್ಕೇರಿ ಒತ್ತಾಯಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಹದಾಯಿ ನ್ಯಾಯಾಧಿಕರಣ ತೀರ್ಪು: ಕೇಂದ್ರದ ವಿರುದ್ಧ ಗುಡುಗಿದ ನಾಡೋಜ ಪಾಟೀಲ್ ಪುಟ್ಟಪ್ಪ