Publish Date: Tue, 09 Aug 2022 (07:38 IST)
Updated Date: Tue, 09 Aug 2022 (00:42 IST)
ತುಮಕೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂಬ ಊಹಾಪೋಹಗಳು ಹಬ್ಬಿರುವ ಬೆನ್ನಲ್ಲೇ ಮಾಜಿ ಶಾಸಕ ಬಿ. ಸುರೇಶ್ ಗೌಡ ಆಗಸ್ಟ್ 15ರ ಒಳಗಾಗಿ ಎಲ್ಲವೂ ಆಗಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಮುಖ್ಯಮಂತ್ರಿ ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ಅವರ 1 ವರ್ಷದ ಅವಧಿಯಲ್ಲಿ ಕೆರೆ ಕಟ್ಟೆಗಳು ತುಂಬಿವೆ. ಆದರೆ ಪಕ್ಷ ಏನು ನಿರ್ಧಾರ ತೆಗೆದು ಕೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರನ್ನು ಭೇಟಿಯಾಗಿದ್ದೆ. ಅವರು ಅದರ ಬಗ್ಗೆ ಮಾತನಾಡಿಲ್ಲ. ಅದು ಮಾಧ್ಯಮದ ಸೃಷ್ಟಿ. ಆದರೆ ಅವರು ಮುಖ್ಯಮಂತ್ರಿ ಆದರೆ ಸಂತೋಷ ಎಂದು ತಿಳಿಸಿದರು.