Webdunia - Bharat's app for daily news and videos

Install App

ಕೇಂದ್ರ ಸಚಿವರಿಂದ ಡಿಕೆಶಿ ಬಿಜೆಪಿಗೆ ಆಹ್ವಾನ: ಆರೋಪ ತಳ್ಳಿಹಾಕಿದ ಸುರೇಶ್ ಕುಮಾರ್

Webdunia
ಸೋಮವಾರ, 7 ಆಗಸ್ಟ್ 2017 (13:45 IST)
ಐಟಿ ದಾಳಿಗೆ ಮುನ್ನ ಕೇಂದ್ರ ಸಚಿವರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸಂಪರ್ಕಿಸಿದ್ದಾರೆ ಎನ್ನುವ ಕಾಂಗ್ರೆಸ್ ಪಕ್ಷದ ಆರೋಪದಲ್ಲಿ ಹುರುಳಿಲ್ಲ ಎಂದು ಬಿಜೆಪಿ ವಕ್ತಾರ, ಮಾಜಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಷ್ಟೊಂದು ವಿವೇಚನೆ ಇಲ್ಲದಿರುವ ಕೇಂದ್ರ ಸಚಿವರು ಇಲ್ಲ. ಯಾರೊಬ್ಬ ಕೇಂದ್ರ ಸಚಿವರು ಡಿ.ಕೆ.ಶಿವಕುಮಾರ್‌ರನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ಪ್ರಭಾವಶಾಲಿ ಕೇಂದ್ರ ಸಚಿವರೊಬ್ಬರು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿದ್ದರು ಎನ್ನುವ ಸ್ಫೋಟಕ ಮಾಹಿತಿಯನ್ನು ಮಾಧ್ಯಮಗಳು ಬಹಿರಂಗಪಡಿಸಿದ್ದವು.
 
ಕಳೆದ 20 ದಿನಗಳ ಹಿಂದೆ ಪ್ರಧಾನಿ ಮೋದಿಯವರ ಆತ್ಮಿಯರಾಗಿರುವ ಬಿಜೆಪಿಯ ಕೇಂದ್ರ ಸಚಿವರೊಬ್ಬರು ಡಿ.ಕೆ.ಶಿವಕುಮಾರ್‌‌ಗೆ ಕರೆ ಮಾಡಿ ನಿಮ್ಮಂತಹ ಡೈನಾಮಿಕ್ ನಾಯಕರು ಬಿಜೆಪಿ ಪಕ್ಷಕ್ಕೆ ಬೇಕಾಗಿದೆ. ಆದ್ದರಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಎಂದು ಆಹ್ವಾನ ನೀಡಿದ್ದರೂ ಎನ್ನಲಾಗಿದೆ.
 
ಬಿಜೆಪಿಯ ಥಿಂಕ್‌ಟ್ಯಾಂಕ್ ಎಂದು ಕರೆಯಲಾಗುವ ಕೇಂದ್ರ ಸಚಿವರೊಬ್ಬರು, ಡಿಕೆಶಿಯವರಿಗೆ ಪಕ್ಷದಲ್ಲಿ ಉನ್ನತ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು ಎನ್ನಲಾಗುತ್ತಿದೆ. ನಿಮ್ಮ ನಾಯಕರೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನೀವು ಕೂಡಾ ಪಕ್ಷಕ್ಕೆ ಬನ್ನಿ ಎಂದು ಕೋರಿದ್ದರು ಎಂದು ವರದಿಯಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments