ಸುರೇಶ್​​​​​​​​​ ಸ್ಪರ್ಧೆ ಖಚಿತವಾಗಿಲ್ಲ-ಡಿಕೆಶಿ

Webdunia
ಮಂಗಳವಾರ, 14 ಮಾರ್ಚ್ 2023 (16:11 IST)
ರಾಮನಗರ ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರ. ಇಲ್ಲಿ ಒಕ್ಕಲಿಗ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದರೆ ಗೆಲುವು ಸುಲಭ ಎಂಬ ಮಾತಿದೆ. ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಈ ಭಾರಿ ತಮ್ಮ ಪುತ್ರ ನಿಖಿಲ್ ​ ಕುಮಾರಸ್ವಾಮಿಯನ್ನು ಈ ಕ್ಷೇತ್ರದ JDS ಅಭ್ಯರ್ಥಿಯಾಗಿ ನಿಲ್ಲಿಸಲು ತಯಾರಿ ನಡೆಸಿದ್ದಾರಂತೆ. ಈ ಹಿನ್ನೆಲೆಯಲ್ಲಿ JDSಗೆ ಠಕ್ಕರ್​​ ಕೊಡಲು ಕಾಂಗ್ರೆಸ್ ಸಜ್ಜಾಗಿದ್ದು, ಒಕ್ಕಲಿಗ JDS ನಾಯಕನ ಪ್ರತಿ ಸ್ಪರ್ಥಿಯಾಗಿ ಒಕ್ಕಲಿಗ ಕೈ ನಾಯಕ D.Kಸುರೇಶ್​​​ಗೆ ಟಿಕೆಟ್​ ನೀಡಲು ತಯಾರಿ ನಡೆಸಿದ್ದಾರೆ ಎನ್ನುವ ಚರ್ಚೆ ಮುನ್ನೆಲೆಗೆ ಬಂದಿತ್ತು.. ಸಂಸದ D.K. ಸುರೇಶ್​​ ರಾಮನಗರದಿಂದ ಸ್ಪರ್ಧೆ ಮಾಡ್ತಾರಾ ಎಂಬ ಪ್ರಶ್ನೆಗೆ ಸ್ವತಃ KPCC ಅಧ್ಯಕ್ಷ D.K. ಶಿವಕುಮಾರ್​​​​​ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ಈ ರೀತಿಯ ಪ್ರಪೋಸಲ್ ಇದೆ, ಇದನ್ನು ತಳ್ಳಿ ಹಾಕಲ್ಲ. ಕೂತು ಮಾತನಾಡಬೇಕು ಎಂಬ ಸಂದೇಶ ನನಗಿದೆ. ಹೈ ಕಮಾಂಡ್​​ನಿಂದ ಸಂದೇಶ ಬಂದಿದ್ದು ನಿಜ ಎಂದು ಡಿಕೆಶಿ ಹೇಳಿದ್ದಾರೆ. ಹಿಂದೆ ಈ ವಿಚಾರ ಚರ್ಚೆ ಆಗಿತ್ತು.. ಕಾರ್ಯಕರ್ತರು ರಾಮನಗರದಿಂದ D.K ಸುರೇಶ್​ ಸ್ವರ್ಧೆಗೆ ಒತ್ತಾಯಿಸಿದ್ರು. ಆದರೆ ನಾವು ಅದರ ಬಗ್ಗೆ ತೀರ್ಮಾನ ಮಾಡಿರಲಿಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments