Select Your Language

Notifications

webdunia
webdunia
webdunia
webdunia

ಸರ್ಜಿಕಲ್ ಸ್ಟ್ರೈಕ್‌: ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು ಗೊತ್ತಾ?

ಸರ್ಜಿಕಲ್ ಸ್ಟ್ರೈಕ್‌: ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು ಗೊತ್ತಾ?
ಬಿಲ್ವಾರ , ಮಂಗಳವಾರ, 27 ನವೆಂಬರ್ 2018 (14:33 IST)
ಸರ್ಜಿಕಲ್ ಸ್ಟ್ರೈಕ್ವಿಷಯಕ್ಕೆ ಸಂಬಂಧಿಸಿದಂತೆ ವಿನಾಕಾರಣ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೆ, ಪಾಕಿಸ್ತಾನದಲ್ಲಿ ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ನ್ನು ಕಾಂಗ್ರೆಸ್ ಪ್ರಶ್ನಿಸಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜಸ್ತಾನ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಬಿರುಸಿನ ಪ್ರಚಾರ ಕೈಗೊಂಡು ಮತದಾರರ ಓಲೈಕೆಗೆ ಮುಂದಾಗಿದ್ದಾರೆ.

ಬಿಲ್ವಾರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಸೆಪ್ಟೆಂಬರ್-2016ರಲ್ಲಿ ತಮ್ಮ ಸರ್ಕಾರ ಪಾಕಿಸ್ತಾನದ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಸಂದೇಹವಿದೆ. ಆದರೆ, ಸೇನಾಪಡೆಯ ಕಮಾಂಡೋಗಳು ದಾಳಿ ನಡೆಸುವ ವೇಳೆ ಕ್ಯಾಮರಾಗಳಲ್ಲಿ ದಾಖಲಿಸಿರುವ ಸಾಕ್ಷಿಗಳನ್ನು ಕಾಂಗ್ರೆಸ್ ಪಕ್ಷ ಕೇಳಿದರೆ ಒದಗಿಸುತ್ತದೆ ಎಂದು ಹೇಳಿದರು.

ತಮ್ಮದೇ ಭಾಷೆಯಲ್ಲಿ ಭಯೋತ್ಪಾದಕರು ಮತ್ತು ನಕ್ಸಲೀಯರ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ಸಿಗರು ನಕ್ಸಲೀಯರನ್ನು ಕ್ರಾಂತಿಕಾರಿಗಳೆಂದು ಕರೆದು ಅವರಿಗೆ ಪ್ರಮಾಣಪತ್ರವನ್ನು ನೀಡುತ್ತಿದೆ ಎಂದು ಆರೋಪಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಟೋಲ್ ಸಂಗ್ರಹ ವಿರುದ್ಧ ಜನರು ಮಾಡಿದ್ದೇನು ಗೊತ್ತಾ?