Publish Date: Thu, 02 Nov 2023 (14:40 IST)
Updated Date: Thu, 02 Nov 2023 (13:36 IST)
ರಾಜ್ಯ ಕಾಂಗ್ರೆಸ್ನಲ್ಲಿ ಆಂತರಿಕ ಕಲಹ, ಅಸಮಾಧಾನ, ವಿಭಿನ್ನ ಹೇಳಿಕೆಗಳು ಹೆಚ್ಚಾಗುತ್ತಿರುವಂತೆಯೇ ಅದಕ್ಕೆ ತೇಪೆ ಹಚ್ಚಲು ಹೈಕಮಾಂಡ್ ಮುಂದಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ದು, ಪಕ್ಷದ ನಾಯಕರ ಜತೆ ಸಮಾಲೋಚನೆ ನಡೆಸಿದ್ದಾರೆ. ಬಳಿಕ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸುರ್ಜೇವಾಲ, ಪಕ್ಷದ ಚೌಕಟ್ಟು ಮೀರಿ ಸಚಿವರು, ಶಾಸಕರು ಮಾತನಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.