Publish Date: Sun, 13 Jan 2019 (17:09 IST)
Updated Date: Sun, 13 Jan 2019 (17:10 IST)
ಶ್ರೀಗಂಧದ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ. ಮೂರ್ತಿ(28) ಬಂಧಿತ ಖದೀಮನಾಗಿದ್ದಾನೆ.
ಕನಕಪುರ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಶ್ರೀಗಂಧ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ ಮಾಡಿದ್ದಾರೆ.
ಕನಕಪುರ ಸುತ್ತಮುತ್ತ ಶ್ರೀಗಂಧದ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಮೂರ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆರೋಪಿ ಮೂರ್ತಿ ಮೂಲತಃ ತಮಿಳುನಾಡು ರಾಜ್ಯದವನಾಗಿದ್ದಾನೆ.
ವಲಯ ಅರಣ್ಯ ಅಧಿಕಾರಿ ದಿನೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ಉಳಿದ ನಾಲ್ವರು ಪರಾರಿಯಾಗಿದ್ದಾರೆ. ಉಳಿದ ಆರೋಪಿಗಳಿಗೆ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.