Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ; ಕಾಂಗ್ರೆಸ್ ಶಾಸಕ ಹ್ಯಾರಿಸ್ ಸೇರಿ ನಾಲ್ವರಿಗೆ ಗಾಯ

ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋಟ; ಕಾಂಗ್ರೆಸ್ ಶಾಸಕ ಹ್ಯಾರಿಸ್ ಸೇರಿ ನಾಲ್ವರಿಗೆ ಗಾಯ
ಬೆಂಗಳೂರು , ಗುರುವಾರ, 23 ಜನವರಿ 2020 (06:28 IST)
ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ರಾತ್ರಿ 9.30ಕ್ಕೆ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಸೇರಿ ನಾಲ್ವರು ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿವೇಕನಗರದ ವೆನಾರ್ ಪೇಟೆ ದೇವರ ಕಾರ್ಯಕ್ರಮದಲ್ಲಿ ಶಾಸಕ ಹ್ಯಾರಿಸ್ ಭಾಗಿಯಾಗಿದ್ದರು. ಆ ವೇಳೆ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಶಾಸಕ ಹ್ಯಾರಿಸ್ ಸೇರಿ ನಾಲ್ವರಿಗೆ ಗಾಯವಾಗಿದೆ.


ತಕ್ಷಣ ಅವರನ್ನು ಸೆಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೂಗಲ್ ಸರ್ಚ್ ಮಾಡಿ 5 ಲಕ್ಷ ರೂ ಪಂಗನಾಮ ಹಾಕಿಸಿಕೊಂಡ ಯುವತಿ