ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆಯೊಬ್ಬರು ಆತ್ಮಹತ್ಯೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗುಮ್ಮನಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ನವವಿವಾಹಿತೆಯನ್ನು ರೂಪಾ (29) ಎಂದು ಗುರುತಿಸಲಾಗಿದೆ. 2 ವರ್ಷಗಳ ಹಿಂದೆಯಷ್ಟೇ ಸುರೇಶ್ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದಳು. ಸುರೇಶ್ ಸಾಸಲು ಪಂಚಾಯಿತಿಯಲ್ಲಿ ಡಾಟಾ ಎಂಟ್ರಿ ಆಪರೇಟಿಂಗ್ ಆಗಿ ಕೆಲಸ ಮಾಡುತ್ತಿದ್ದ.
ಮಗಳ ಇಚ್ಛೆಯಂತೆ 2 ವರ್ಷಗಳ ಹಿಂದೆ ರೂಪಾ ಕುಟುಂಬದವರು ಸುರೇಶ್‌ನೊಂದಿಗೆ ಮದುವೆ ಮಾಡಿಸಿದ್ದರು.
ಮೂಲಗಳ ಪ್ರಕಾರ ಮದುವೆ ಸಂದರ್ಭದಲ್ಲಿ ರೂಫಾಗೆ 100 ಗ್ರಾಂ ಒಡವೆ ಸಹ ನೀಡಿದ್ದರು. ಆದ್ರೆ ಸುರೇಶ್ ಕುಟುಂಬಸ್ಥರು ಮದುವೆಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದೇವೆ.
ಆ ಹಣವನ್ನು ತೆಗೆದುಕೊಂಡು ಬಾ ಎಂದು ಆಕೆಗೆ ಕಿರುಕುಳ ನೀಡುತ್ತಿದ್ದರು. ಕಿರುಕುಳಕ್ಕೆ ಬೇಸತ್ತ ರೂಪಾ ಆತ್ಮಹತ್ಯೆಯ ದಾರಿ ಹಿಡಿದಿದ್ದಾಳೆ ಎಂದು ಮೂಲಗಳು ತಿಳಿಸಿವೆ.