Publish Date: Mon, 25 Jul 2022 (19:54 IST)
Updated Date: Mon, 25 Jul 2022 (19:56 IST)
ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಅಸ್ಸಾಂ ಮೂಲದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ನಗರ ಅಪರಾಧ ದಳ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.. ನಿನ್ನೆ ರಾತ್ರಿ 7 ಗಂಟೆ ವೇಳೆಯಲ್ಲಿ ಶಂಕಿತ ಉಗ್ರ ವಾಸವಿದ್ದ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದರು. ತಿಲಕ್ ನಗರದ ಬಿಟಿಪಿ ಪ್ರದೇಶದಲ್ಲಿ ಕಟ್ಟಡವೊಂದರ ಮೂರನೇ ಮಹಡಿಯಲ್ಲಿದ್ದ ಕೋಣೆಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ ಕೆಲ ಯುವಕರೊಂದಿಗೆ ಶಂಕಿತ ಉಗ್ರನೂ ವಾಸ್ತವ್ಯ ಹೂಡಿದ್ದ. ಖಚಿತ ಮಾಹಿತಿ ಮೇರೆಗೆ 30ಕ್ಕೂ ಹೆಚ್ಚು ಸಿಬ್ಬಂದಿಯಿದ್ದ CCB ಪೊಲೀಸರ ತಂಡವು ದಾಳಿ ನಡೆಸಿತ್ತು. ಪ್ರಕರಣ ಸಂಬಂಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ..ಅಲ್ಲದೇ, 10ನೇ ತರಗತಿ ಓದಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಮೂಲತಃ ಅಸ್ಸಾಂ ಮೂಲದವನಾಗಿದ್ದಾನೆ..ಇನ್ನು, ಅಖ್ತರ್ ಸಹಚರರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.