Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಸಂಸದರ ಅಮಾನತು ಪ್ರಕರಣ: ರಾಜ್ಯ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಾಂಗ್ರೆಸ್ ಸಂಸದರ ಅಮಾನತು ಪ್ರಕರಣ: ರಾಜ್ಯ ಕಾಂಗ್ರೆಸ್‌ನಿಂದ ಪ್ರತಿಭಟನೆ
ಬೆಂಗಳೂರು , ಮಂಗಳವಾರ, 4 ಆಗಸ್ಟ್ 2015 (12:48 IST)
ನಿನ್ನೆ ಕಾಂಗ್ರೆಸ್‌ನ 27 ಮಂದಿ ಸಂಸದರನ್ನು ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಅವರು ಅಮಾನತುಗೊಳಿಸಿದ ನಿರ್ಧಾರವನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ಘಟಕದ ಸದಸ್ಯರು ಹಾಗೂ ಕಾರ್ಯಕರ್ತರು ನಗರದ ಮೌರ್ಯ ಸರ್ಕಲ್‌ನಲ್ಲಿ ಇಂದು ಪ್ರತಿಭಟನೆ ನಡೆಸಿದರು. 
 
ಪ್ರತಿಭಟನೆಯು ಪ್ರಾದೇಶಿಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ನಡೆದಿದ್ದು, ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಸಂಪುಟದ ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ದಿನೇಶ್ ಗುಂಡೂರಾವ್ ಸೇರಿ 10 ಮಂದಿ ಸಚಿವರು ಮತ್ತು ಸಾಕಷ್ಟು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಈ ವೇಳೆ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಹರಿಹಾಯ್ದ ಪ್ರತಿಭಟನಾಕಾರರು, ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಹೊಂದಿಲ್ಲದ ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆಗಳವನ್ನು ಕೂಗಿದರು. 
 
ಇದೇ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪರಮೇಶ್ವರ್ ಅವರು ಮಾತನಾಡಿ, ಬಿಜೆಪಿಯ ಈ ಸಿದ್ಧಾಂತ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ಅವವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಅಲ್ಲದೆ ಸಭಾಧ್ಯಕ್ಷರು ಸರ್ಕಾರದ ಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಈ ನಿರ್ಧಾರ ಕೈಗೊಂಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ, ಹೇಯ ಎಂದು ಬಿಜೆಪಿ ವಿರುದ್ಧ ಗರಂ ಆದರು. 
 
ಇನ್ನು ಕೇಂದ್ರ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಅವರು ಲಲಿತ್ ಮೋದಿ ವೀಸಾ ಹಗರಣದಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಿರ್ವಹಿಸುತ್ತಿರುವ ಉನ್ನತ ಸ್ಥಾನಗಳಿಂದ ಅವರನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಸಂಸದರು ನಿನ್ನೆ ಸದನದ ಕಲಾಪ ನಡೆಯುತ್ತಿದ್ದ ವೇಳೆ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಲಾಪಕ್ಕೆ ತೊಂಡರೆಯಾಗುತ್ತಿದೆ ಎಂಬ ಕಾರಣ ನೀಡಿದ್ದ ಸಭಾಧ್ಯಕ್ಷೆ ಮಹಾಜನ್, ನಿನ್ನೆ ಕಾಂಗ್ರೆಸ್‌ನ 27 ಮಂದಿ ಸಂಸದರನ್ನು 5 ದಿನಗಳ ಕಾಲ ಅಮಾನತುಗೊಳಿಸಿ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. 

Share this Story:

Follow Webdunia kannada