ಧಾರವಾಡ ಜಿಲ್ಲೆಯ ಯಮನೂರಿನಲ್ಲಿ ರೈತರ ಮೇಲೆ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೇವಲ ಹಲ್ಲೆ ನಡೆಸಿರುವ ಪೊಲೀಸ್ ಪೇದೆಗಳ ಮೇಲೆ ಕ್ರಮ ಕೈಗೊಂಡರೆ ಸಾಲದು, ರೈತರ ಮೇಲಿನ ಹಲ್ಲೆಗೆ ಕಾರಣರಾದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಶಿಕ್ಷೆ ನೀಡಲಿ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರುಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು. ಸೈನಿಕರ ಕಷ್ಟಕ್ಕೆ ದಿಢೀರ ಸ್ಪಂದಿಸುವ ಮೋದಿ, ಮಹದಾಯಿ ವಿಚಾರದಲ್ಲಿ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಕರ್ನಾಟಕದ ಶಾಸಕರ ಹಾಗೂ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ತರಲಿ. ಇಲ್ಲವಾದರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟಕ್ಕೆ ಧುಮುಕಲಿ ಎಂದು ಒತ್ತಾಯಿಸಿದರು.
ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮಹದಾಯಿ ವಿವಾದವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಅವರ ಮೇಲೆ ಒತ್ತಡ ತರಲು ನವದೆಹಲಿಯಲ್ಲಿ ಸ್ವಾಮಿಜೀಗಳ ಸಭೆ ಕರೆದು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.