Select Your Language

Notifications

webdunia
webdunia
webdunia
webdunia

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ತುಮಕೂರು ಮಧುಗಿರಿ ಜಿಲ್ಲೆ

Sampriya

ಬೆಂಗಳೂರು , ಸೋಮವಾರ, 4 ಆಗಸ್ಟ್ 2025 (19:24 IST)
Photo Credit X
ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕು ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳ ಸಂಶಯಾಸ್ಪದ ಸಾವು ಸಂಬಂಧ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.

ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಮ್ಮ ರಾಷ್ಟ್ರಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು. 

ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ. 

ನವಿಲುಗಳ ಸಾವಿಗೆ ಕೀಟನಾಶಕಗಳ ಸೇವನೆ ಕಾರಣ ಎಂದು ಮಾಧ್ಯಮಗಳು ವರದಿ ಮಾಡಿತ್ತು. ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಿ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮತ್ತು ನಿಯಮಾನುಸಾರ ಕ್ರಮ ಜರುಗಿಸಲು ಸೂಚಿಸಿದ್ದಾರೆ. 

ಜೊತೆಗೆ ಪರಿಶಿಷ್ಟ 1 ಮತ್ತು 2ರ ಯಾವುದೇ ವನ್ಯಜೀವಿ ಮೃತಪಟ್ಟರೂ ಆಡಿಟ್ ಮಾಡಿಸಿ ತಕ್ಷಣವೇ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಕ್ರಮ ವಹಿಸಲು ನಿರ್ದೇಶನ ನೀಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌