Publish Date: Sat, 12 Nov 2022 (17:18 IST)
Updated Date: Sat, 12 Nov 2022 (17:22 IST)
ಬೆಳಗಾವಿಯ ಗ್ರಾಮೀಣ ಠಾಣೆಯಲ್ಲಿ ಕಸ್ಟಡಿಯಲ್ಲಿದ್ದ ಆರೋಪಿ ಅನುಮಾನಾಸ್ಪದ ರೀತಿಯಲ್ಲಿ ಸಾವನಪ್ಪಿದ್ದಾನೆ. ಗಾಂಜಾ ಪ್ರಕರಣದಲ್ಲಿ ಬಂಧಿತ ಆರೋಪಿ ಬಸನಗೌಡ ಪಾಟೀಲ್ ಡಾ.
ಈತ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ನಿವಾಸಿ, ವಿಚಾರಣೆ ವೇಳೆ ಅಸ್ವಸ್ಥಗೊಂಡಿದ್ದ. ಈತನನ್ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೇ ಸಾವನಪ್ಪಿದ್ದಾನೆ.
ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ರು. ನಂತರ ಮಾತನಾಡಿದ ಅವರು, ಹಳೇ ಪ್ರಕರಣವೊಂದರ ಸಂಬಂಧ ಬಸವನಗೌಡ ಪಾಟೀಲ್ ಎಂಬಾತನನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಪೊಲೀಸ್ ವಶದಲ್ಲಿ ಇರುವ ಸಂದರ್ಭದಲ್ಲಿ ವಾಂತಿಯಾಗಲು ಶುರುವಾಗಿದೆ. ತಕ್ಷಣ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಠಾಣೆಗೆ ಕರೆದುಕೊಂಡ ಬಂದ ಮೇಲೂ ವಾಂತಿ, ಬೆವರು ಜಾಸ್ತಿಯಾಗಿದೆ. ನಂತರ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸನಗೌಡನಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.