ಬೆಂಗಳೂರು : ಸತೀಶ್ ಜಾರಕಿಹೊಳಿ ಹೇಳಿಕೆ ವಿರುದ್ಧ ಕೇಸರಿಪಡೆ ಸಿಡಿದೆದ್ದಿದ್ದು, ಸಚಿವ ಸುನೀಲ್ ಕುಮಾರ್ ಸ್ವಾಭಿಮಾನಿ ಹಿಂದು ಅಭಿಯಾನ ಆರಂಭಿಸಿದರು.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ.
ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ಹೊರಹಾಕಿದರು.