Publish Date: Sat, 30 Dec 2017 (13:31 IST)
Updated Date: Sat, 30 Dec 2017 (13:35 IST)
ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕಾಳಿಕಾಶ್ರಮದ ಋಷಿಕುಮಾರ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಂ.ಜಿ. ರಸ್ತೆಯಲ್ಲಿ ಹೊಸ ವರ್ಷ ಆಚರಣೆಗಾಗಿ ನೀಡಿರುವ ಅನುಮತಿ ರದ್ದುಪಡಿಸಲು ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗುವುದು ಎಂದಿದ್ದಾರೆ.
ಕಳೆದ ವರ್ಷ ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಎಂ.ಜಿ.ರಸ್ತೆಯಲ್ಲಿ ನಡೆದ ಅಹಿತಕರ ಘಟನೆ ಇಡೀ ದೇಶದ ಗಮನ ಸೆಳೆದಿದೆ. ಶಾಂತಿಗೆ ಹೆಸರಾದ ಮಹಾತ್ಮಗಾಂಧಿ ಹೆಸರಿನಲ್ಲಿರುವ ರಸ್ತೆಯನ್ನು ಹೊಸ ವರ್ಷ ಆಚರಣೆಯಲ್ಲಿ ಕುಡುಕರ ಅಡ್ಡೆಯನ್ನಾಗಿ ಮಾಡಬಾರದು ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.