ಕಲ್ಲು ನಾಗರಕ್ಕೆ ಹಾಲು ಹಾಕಬೇಡಿ ಎಂದ ಸ್ವಾಮೀಜಿ

Webdunia
ಗುರುವಾರ, 1 ಆಗಸ್ಟ್ 2019 (17:40 IST)
ಶ್ರಾವಣ ಮಾಸದಲ್ಲಿ ಬರುವ ನಾಗರ ಪಂಚಮಿಯಲ್ಲಿ ಕಲ್ಲಿನ ನಾಗರಹಾವಿಗೆ ಹಾಲು ಎರೆಯಬಾರದು. ಹೀಗಂತ ಕೂಡಲಸಂಗಮ ಸ್ವಾಮೀಜಿ ಹೇಳಿದ್ದಾರೆ.

ಕಲ್ಲು ನಾಗರಕ್ಕೆ ಹಾಲು ಎರೆಯುವ ಬದಲು ಮಕ್ಕಳಿಗೆ ಹಾಲು ನೀಡಬೇಕು. ಹೀಗಂತ ದಾವಣಗೆರೆಯಲ್ಲಿ ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಶ್ರೀ ಗಳು ಮನವಿ ಮಾಡಿಕೊಂಡಿದ್ದಾರೆ. ದಾವಣಗೆರೆಯ ಕೊಂಡಜ್ಜಿ ರಸ್ತೆಯಲ್ಲಿರುವ  ಬಿಜಿಎಂ ಶಾಲೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ನಡೆದ 22 ನೇ ವರ್ಷದ ಕಲ್ಲ ನಾಗರಕ್ಕೆ ಹಾಕುವ ಹಾಲು ಮಕ್ಕಳ ಪಾಲು ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ರು.

ದೇಶಾದ್ಯಂತ ನಾಗರ ಪಂಚಮಿ ಆಚರಣೆ ಮಾಡಲಾಗುತ್ತದೆ. ಆಗ ಲಕ್ಷಾಂತರ ‌ಲೀಟರ್ ನಷ್ಟು ಹಾಲನ್ನು ನಾಗರ ಮೂರ್ತಿಗಳಿಗೆ, ಹುತ್ತಗಳಿಗೆ ಎರೆದು ವೇಸ್ಟ್ ಮಾಡುತ್ತಿದ್ದಾರೆ. ಅದನ್ನು ಮಕ್ಕಳಿಗೆ ನೀಡಿದ್ರೆ ಸದೃಢವಾದಂತಹ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ. ಹಾಲು ‌ಹುತ್ತಕ್ಕೆ ಎರೆಯುವುದರಿಂದ ಹಾವುಗಳು ಸಾವನ್ನಪ್ಪುವ ಘಟನೆಗಳು ನಡೆದಿವೆ.

ಆದ್ದರಿಂದ ಕೇವಲ‌ ಪೂಜೆ ಸಲ್ಲಿಸಿ, ಹಾಲನ್ನು ಮಕ್ಕಳಿಗೆ ವಿತರಣೆ ಮಾಡುವುದರ ಮೂಲಕ ಹಬ್ಬವನ್ನು ಆಚರಣೆ ಮಾಡಿ ಅಂತ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಾಖಂಡ: ಕಂದಕಕ್ಕೆ ಬಿದ್ದ 18ಮಂದಿಯಿದ್ದ ಕಾರು, 5ಮಂದಿ ದುರ್ಮರಣ

ರಾಹುಲ್ ಗಾಂಧಿ ಯಾವತ್ತೂ ಫಾರಿನ್ ಟೂರ್ ನಲ್ಲಿ ಬ್ಯುಸಿ ಎಲ್ಲಿ ಹೋಗ್ತಾರೋ ಗೊತ್ತಿಲ್ಲ: ಬಿಜೆಪಿ ವ್ಯಂಗ್ಯ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಿಪಿ ಯೋಗೇಶ್ವರ್ ಅಚ್ಚರಿ ಹೇಳಿಕೆ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಮುಂದಿನ ಸುದ್ದಿ
Show comments