Publish Date: Mon, 19 Nov 2018 (16:57 IST)
Updated Date: Mon, 19 Nov 2018 (16:59 IST)
ರೈತರ ಹಾಗೂ ಕಬ್ಬು ಬೆಳೆಗಾರರ ಪ್ರತಿಭಟನೆಗೆ ವಿವಿಧ ಸಂಘಟನೆಗಳು, ಸ್ವಾಮೀಜಿಗಳು ಸಾಥ್ ನೀಡುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ವ್ಯಕ್ತವಾಗುತ್ತಿದೆ. ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿಯನ್ನು ರೈತರು ನಡೆಸುತ್ತಿದ್ದಾರೆ. ಮಾಜಿ ಶಾಸಕ ಹಾಗೂ ಬಿಜೆಪಿ ಕಿಸಾನ್ ಮೋರ್ಚಾ ರಾಜ್ಯಾಧ್ಯಕ್ಷ ಲಕ್ಷ್ಮಣ ಸವದಿ ಭೇಟಿ ನೀಡಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.
ಪ್ರತಿಭಟನೆ ನಿರತ ರೈತರಿಗೆ ಕನ್ನಡಪರ ಸಂಘಟನೆಗಳ ಸದಸ್ಯರು ಸಹ ಬೆಂಬಲ ಸೂಚಿಸಿದ್ದಾರೆ.