Select Your Language

Notifications

webdunia
webdunia
webdunia
webdunia

ಲೋನ್ ಆ್ಯಪ್ ಕಿರುಕುಳಕ್ಕೆ ಸ್ವರಾಜ್ ಆತ್ಮಹತ್ಯೆ

ಲೋನ್ ಆ್ಯಪ್
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಪುದುವೆಟ್ಟು ನಿವಾಸಿ ಯುವ ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಲೋನ್ ಆ್ಯಪ್ ಕಿರುಕುಳಕ್ಕೆ ಬೇಸತ್ತು ಸ್ವರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ವರಾಜ್ ತನ್ನ ವಾಟ್ಸಾಪ್​ನಲ್ಲಿ ಅಕ್ಕನ ಮಗಳ ಫೋಟೋ ಹಾಕಿದ್ದ. ಈ ಫೋಟೋವನ್ನು ಲೋನ್ ಆ್ಯಪ್​ನವರು ‘Baby for sale’ ಎಂದು ಎಡಿಟ್ ಮಾಡಿ ಸ್ವರಾಜ್​ ಸ್ನೇಹಿತರು, ಕಾಂಟ್ಯಾಕ್ಟ್ ಲಿಸ್ಟ್​ನಲ್ಲಿರುವವರಿಗೆ ಫಾರ್ವರ್ಡ್ ಮಾಡಿದ್ರು. ಈ ರೀತಿಯ ಬ್ಲ್ಯಾಕ್​​​​ಮೇಲ್ ತಡೆಯಲಾಗದೇ ಆಗಸ್ಟ್ 30ರಂದು 30 ಸಾವಿರ ರೂಪಾಯಿ ಕಟ್ಟಿದ್ದ. ಆದರೂ ಇನ್ನಷ್ಟು ಹಣ ಕೊಡಬೇಕೆಂದು ಆಗಸ್ಟ್ 31ರಂದು ಮಧ್ಯಾಹ್ನ 2 ಗಂಟೆಗೆ ಡೆಡ್ ಲೈನ್ ನೀಡಿಲಾಗಿತ್ತು. ಇದರಿಂದ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ತಿಗಾಗಿ ಕಂದಮ್ಮನಿಗೆ ವಿಷವುಣಿಸಿದ ಮಲತಾಯ