Webdunia - Bharat's app for daily news and videos

Install App

ಕೋವಿಡ್‌ ಸಂಕಷ್ಟದಲ್ಲೂ ಸ್ವರ್ಣಭಾರತಿ ಸಹಕಾರ ಬ್ಯಾಂಕ್‌ 1 ಕೋಟಿ 23 ಲಕ್ಷ ಲಾಭ

Webdunia
ಸೋಮವಾರ, 29 ನವೆಂಬರ್ 2021 (20:28 IST)
ಬೆಂಗಳೂರು ನವೆಂಬರ್‌ 29, 2021: ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡಬೇಕು ಎನ್ನುವ ಉದ್ದೇಶದಿಂದ ಪ್ರಾರಂಭವಾಗಿರುವ ಸ್ವರ್ಣಭಾರತಿ ಸಹಕಾರಿ ಬ್ಯಾಂಕ್‌, ಕೋವಿಡ್‌ ಸಾಂಕ್ರಾಮಿಕದ ಸಂಕಷ್ಟದ ನಡುವೆಯೂ 1 ಕೋಟಿ 23 ಲಕ್ಷ ರೂಪಾಯಿಗಳ ನಿವ್ವಳ ಲಾಭಗಳಿಸಿದೆ. ಅಲ್ಲದೆ, ಈ ಬಾರಿ ನಮ್ಮ ಗ್ರಾಹಕರಿಗೆ ಶೇಕಡಾ 7.50 ರಷ್ಟು ಡಿವೆಡೆಂಟ್‌ ಘೋಷಿಸಿದ್ದೇವೆ ಎಂದು ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ ಎಲ್‌ ವೆಂಕಟರಾಮರೆಡ್ಡಿ ತಿಳಿಸಿದ್ದಾರೆ. 
 
ಸ್ವರ್ಣಭಾರತಿ ಸಹಕಾರಿ ಬ್ಯಾಂಕಿನ 23 ನೇ ವಾರ್ಷಿಕ ಮಹಾಸಭೆ ಯಲ್ಲಿ ಈ ಬಗ್ಗೆ ಬ್ಯಾಂಕಿನ ಅಧ್ಯಕ್ಷರಾದ ಡಾ. ಪಿ.ಎಲ್‌ ವೆಂಕಟರಾಮರೆಡ್ಡಿಯವರು ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಶೇಕಡಾ 17 ರಷ್ಟು ಪ್ರಗತಿಯನ್ನು ಬ್ಯಾಂಕ್‌ ಸಾಧಿಸಿದೆ. ಪ್ರಸ್ತುತ 10 ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಹೊಂದುವ ಮೂಲಕ ಬೆಂಗಳೂರು ನಗರದಲ್ಲಿ ಗ್ರಾಹಕರ ಸ್ನೇಹಿಯಾದ ಸಹಕಾರಿ ಬ್ಯಾಂಕುಗಳಲ್ಲಿ ಒಂದು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ರೂ. 176.36 ಕೋಟಿಗೂ ಹೆಚ್ಚು ದುಡಿಯುವ ಬಂಡವಾಳ ಹೊಂದಿದೆ. ನೆಟ್‌ ಎನ್‌ಪಿಎ ಶೇಡಕಾ 4.87 ಕ್ಕೆ ಇಳಿಕೆಯಾಗಿದ್ದು 1.23 ಕೋಟಿಗಳಷ್ಟು ಲಾಭವನ್ನು ಗಳಿಸಿದೆ. ಲೋಕ್ಕಪರಿಶೋಧನಾ ವರ್ಗೀಕರಣದಲ್ಲಿ ಬ್ಯಾಂಕು “ಏ” ಶ್ರೇಣಿಯನ್ನು ಪಡೆದು ಸಾರ್ವಜನಿಕರ ವಿಶ್ವಾಸಗಳಿಸಿದೆ. ಅಲ್ಲದೆ, ಶೇಕಡಾ 7.50 ರಷ್ಟು ಡಿವಿಡೆಂಟ್‌ ನ್ನು ನಮ್ಮ ಬ್ಯಾಂಕಿನ ಗ್ರಾಹಕರುಗಳಿಗೆ ಘೋಷಿಸಲಾಗಿದೆ ಎಂದು ಹರ್ಷವ್ಯಕ್ತಪಡಿಸಿದರು. 
 
ಇದೇ ಸಂಧರ್ಭದಲ್ಲಿ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ಬ್ಯಾಂಕಿನ ಗ್ರಾಹಕರ ಮಕ್ಕಳಿಗೆ ಪ್ರೋತ್ಸಾಹ ಧನವನ್ನು ನೀಡಿ ಸನ್ಮಾನಿಸಲಾಯಿತು. 
 
ಸಭೆಯಲ್ಲಿ ಸ್ವರ್ಣಭಾರತಿ ಸಹಕಾರ ಬ್ಯಾಂಕಿನ ಮಾಜಿ ಅಧ್ಯಕ್ಷರಾದ ಟಿ ಎನ್‌ ಚೌಡಪ್ಪನವರು, ನಿರ್ದೇಶಕರುಗಳಾದ ಕೆ. ನರಸಿಂಹ ಮೂರ್ತಿ, ಟಿ ಸತೀಶ್‌ ಬಾಬು, ಆರ್‌ ಹರೀಶ್‌, ಶ್ರೀಮತಿ ಡಾ|| ಲತಾ ನಾರಾಯಣ್‌, ಕೆ ನಾರಾಯಣಸ್ವಾಮಿ, ಬಿ ನಾಗರಾಜ, ಜಿ.ಎಂ ರವೀಂದ್ರ, ಡಿ.ಬಿ ಶರತ್‌ ಕುಮಾರ್‌, ಸಿ ವೆಂಕಟೇಶ್‌, ಎನ್‌. ನಾಗರಾಜ್‌, ಜೆ.ಕೆ ರಾಮಕೃಷ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ ಮತ್ತು ಗ್ರಾಹಕರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments